ಅಥರ್ವವೇದ
From Wikipedia, the free encyclopedia
ಅಥರ್ವವೇದ ಹಿಂದೂ ಧರ್ಮದ ನಾಲ್ಕು ವೇದಗಳಲ್ಲಿ ಕೊನೆಯದು. ಅಥರ್ವಣ ಅಂಗೀರಸ ಋಷಿಗಳು ರಚಿಸಿದ ಮಂತ್ರಗಳಿಂದ ಕೂಡಿದ ವೇದವಾದುದರಿಂದ ಈ ಹೆಸರು. ಇದರಲ್ಲಿ ೨೦ ಕಾಂಡಗಳೂ, ೭೬೦ ಸೂಕ್ತಗಳೂ, ೬೦೦೦ ಮಂತ್ರಗಳೂ ಇವೆ. ಗದ್ಯ ಹಾಗೂ ಪದ್ಯ ಎರಡೂ ಶೈಲಿಯಲ್ಲಿ ರಚಿತವಾಗಿದೆ. ಈ ವೇದದಲ್ಲಿ ವಿವಾಹ ಪದ್ಧತಿ,ಶವಸಂಸ್ಕಾರ, ಗೃಹನಿರ್ಮಾಣ ಮುಂತಾದ ಜನರ ದಿನನಿತ್ಯದ ಜೀವನಕ್ಕೆ ಸಂಬಂಧಿಸಿದ ವಿಚಾರಗಳು ಕೂಡಾ ಸೇರಿಕೊಂಡಿದೆ. ಮಾಟ ಮಂತ್ರ, ಯಕ್ಷಿಣಿವಿದ್ಯೆ,ಇಂದ್ರಜಾಲ ಮುಂತಾದವುಗಳೂ ವಿಸ್ತಾರವಾಗಿ ಪ್ರಸ್ತಾಪಿಸಲ್ಪಟ್ಟಿದೆ. ಧನುರ್ವಿದ್ಯೆ, ರೋಗನಿವಾರಣೋಪಾಯ, ಔಷಧಿಗಳ ವಿವರ ಕೂಡಾ ಇದರಲ್ಲಿದೆ. ಯಜ್ಞಯಾಗಾದಿಗಳನ್ನು ನಿರ್ವಹಿಸುವ ಕ್ರಮದ ವಿವರಗಳೂ ಸೇರಿದೆ. ಇದು ದಿನನಿತ್ಯದ ಜೀವನಕ್ಕೆ ಬೇಕಾದ ಜ್ಞಾನವನ್ನು ಕೊಡುವ ಭಂಡಾರವೇ ಆಗಿದೆ.[1] ಇದು ವೇದಗಳ ರಚನೆಯಲ್ಲಿ ಕೊನೆಯದು.[2][3]
ಹಿಂದೂ ಧರ್ಮಗ್ರಂಥಗಳು |
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
ಇತರ ಧರ್ಮಗ್ರಂಥಗಳು
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |