ಮುರುಡೇಶ್ವರ
ಕರ್ನಾಟಕದ ಪ್ರವಾಸಿ ತಾಣ / From Wikipedia, the free encyclopedia
ಮುರುಡೇಶ್ವರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿದೆ.[1][2] ಇಲ್ಲಿರುವ ಮುರುಡೇಶ್ವರ ಸ್ವಾಮಿಯ ದೇವಸ್ಥಾನವು ಧಾರ್ಮಿಕ ಪುಣ್ಯ ಸ್ಥಳವಾಗಿದ್ದು, ಐತಿಹಾಸಿಕವಾಗಿ ಪ್ರಖ್ಯಾತಿಯನ್ನು ಹೊಂದಿದೆ. ಅರಬ್ಬೀ ಸಮುದ್ರದ ತೀರದಲ್ಲಿರುವ ಈ ಊರು, ಪ್ರಪಂಚದ ಅತ್ಯಂತ ಎತ್ತರದ ಶಿವನ ವಿಗ್ರಹಕ್ಕೆ ಹೆಸರುವಾಸಿ ಯಾಗಿದೆ. ಮುರುಡೇಶ್ವರ ಕೇವಲ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಪ್ರವಾಸಿ ತಾಣವೂ ಆಗಿದೆ.