ಲಕ್ಷ್ಮಿ
ಹಿಂದೂ ಗೊಡ್ಡೆಸ್ ಓಫ್ ವೆಲ್ತ್ , ಲವ್ , ಪ್ರಾಸ್ಪೆರಿಟಿ / From Wikipedia, the free encyclopedia
ಲಕ್ಷ್ಮಿ - ಹಿಂದೂ ಧರ್ಮದಲ್ಲಿನ ದೇವತೆಗಳಲ್ಲೊಬ್ಬರು. ವೈಕುಂಠದ ಅಧಿಪತಿ ಶ್ರೀವಿಷ್ಣುವಿನ(ನಾರಾಯಣ) ಪತ್ನಿ. ಹಣ, ಐಶ್ವರ್ಯ, ಸಿರಿ, ಸಂಪತ್ತುಗಳ ಅಧಿದೇವತೆಯೆಂದು ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿಯನ್ನು ಮಹಾಲಕ್ಷ್ಮಿ ಎಂದೂ ಕರೆಯಲಾಗುತ್ತದೆ. ಪ್ರತಿವರ್ಷದ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಲಕ್ಷ್ಮಿಗೆ ವಿಶೇಷ ಪೂಜೆಗಳನ್ನು ವರಮಹಾಲಕ್ಷ್ಮಿ ವ್ರತವನ್ನು ಆಚರಿಸುವ ಮೂಲಕ ಸಲ್ಲಿಸಲಾಗುತ್ತದೆ. ದೀಪಾವಳಿ ಹಬ್ಬದ ಸಮಯದಲ್ಲಿ ಹಾಗೂ ನವರಾತ್ರಿ ಹಬ್ಬದ ಸಮಯ ದಲ್ಲಿ ಕೂಡ ವಿಶೇಷ ಪೂಜೆಗಳನ್ನು ಲಕ್ಷ್ಮಿ ಪೂಜೆ ಎಂದು ಆಚರಿಸಲಾಗುತ್ತದೆ.