ವಿಜಯ ದಶಮಿ
From Wikipedia, the free encyclopedia
ವಿಜಯ ದಶಮಿ - ನವರಾತ್ರಿ ಉತ್ಸವದ ಕಡೆಯ ದಿನ. ಈ ದಿನದಂದು ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಹೆಸರೇ ಹೇಳುವಂತೆ ಇದು ದಶಮಿ - ಹತ್ತನೆಯ ದಿನ ಅಂದರೆ ದಸರಾ ಉತ್ಸವದ ಹತ್ತನೆಯ ದಿನ. 'ದಶ ಅಹರ್' -> ದಶಹರ -> ದಶರಾ -> ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ. ಚಾಂದ್ರಮಾನ ರೀತಿಯಲ್ಲಿ ಹೇಳುವುದಾದರೆ ಶರದೃತುವಿನ ಆಶ್ವಯುಜ ಮಾಸ ಶುಕ್ಲಪಕ್ಷದ ಹತ್ತನೆಯ ದಿನ. 'ದಶಹರ'ದಂದು ದಶಕಂಠ ರಾವಣನನ್ನು ಶ್ರೀರಾಮನು ಸಂಹರಿಸಿದ ವಿಜಯೋತ್ಸವವೆಂದೂ ಪ್ರತೀತಿಯಿದೆ. ಉತ್ತರ JJIಭಾರತದ ಕೆಲವೆಡೆ ಈ ದಿನವನ್ನು ಹೊಸವರ್ಷದ ದಿನವೆಂದು ಆಚರಿಸುವ ಪದ್ಧತಿಯೂ ಇದೆ.